
ಸಿದ್ದಾಪುರ: ಸಿದ್ದಾಪುರದಲ್ಲಿ 5 ಕೋಟಿ 33 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣವನ್ನು ದೈವತಾ ಪೂಜೆಯೊಂದಿಗೆ ಪ್ರವೇಶ ಮಾಡಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿ ಶಿರಸಿ-ಸಿದ್ದಾಪುರ ಶಾಸಕ, ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.
ನಂತರ ಮಾತನಾಡಿ ಸುಸಜ್ಜಿತ ಬಸ್ ನಿಲ್ದಾಣದಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲೆಂದು ಶುಭ ಹಾರೈಸಿದರು. ಹಾಗೂ ಸಿದ್ದಾಪುರ ತಾಲೂಕಾ ಪಂಚಾಯತ ಸಭಾಂಗಣದಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಮಾಹಿತಿ, ಶಿಕ್ಷಣ, ಸಂವಹನ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಕುರಿತ ಕಾರ್ಯಾಗಾರ ನಡೆಸಿದರು. ಈ ಸಂದರ್ಭದಲ್ಲಿ ಎನ್‍ಡಬ್ಲ್ಯುಕೆಎಸ್‍ಆರ್‍ಟಿಸಿ ಅಧ್ಯಕ್ಷ ವಿ.ಎಸ್ ಪಾಟೀಲ್, ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.