ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಿದ್ರಕಾನ್ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ಆದಿತ್ಯ ಹೆಗಡೆ ಉಪ್ಪಡಿಕೆ ಅವರ ಅಕಾಲಿಕ ಮರಣಕ್ಕೆ ಧಾರವಾಡ ಹಾವೇರಿ ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರು ಹಾಗೂ ಕೆ.ಡಿ.ಸಿ.ಸಿ. ಬ್ಯಾಂಕ್ ಲಿ., ಶಿರಸಿಯ ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಅವರು ಕಂಬನಿ ಮಿಡಿದಿದ್ದಾರೆ.
ಆದಿತ್ಯ ಹೆಗಡೆಯವರು ಒಬ್ಬ ಕ್ರಿಯಾಶೀಲ ಯುವಕರಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿದ್ದರು ಹಾಗೂ ಅತ್ಯಂತ ಶೃದ್ಧಾ ಭಕ್ತಿಯಿಂದ ಪ್ರಾಮಾಣಿಕವಾಗಿ ಕಳೆದ 7 ವರ್ಷಗಳಿಂದ ಸಿದ್ದಾಪುರ ತಾಲೂಕಿನ ಬಿದ್ರಕಾನ್ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದು, ಕ್ಷೇತ್ರದಲ್ಲಿ ಅವರು ಮಾದರಿಯಾಗಿದ್ದರು, ಆದಿತ್ಯರವರ ಈ ಅಕಾಲಿಕ ಮರಣ ನಮ್ಮ ಜಿಲ್ಲೆಯ ಹಾಲು ಸಂಘಗಳಿಗೆ ತುಂಬಲಾರದ ನಷ್ಟ ಎಂದು ಸುರೇಶ್ಚಂದ್ರ ಹೆಗಡೆ ವಿಷಾದ ವ್ಯಕ್ತ ಪಡಿಸಿದರು.
ಮೃತ ವ್ಯಕ್ತಿ ಆದಿತ್ಯ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದು ಈ ಮೂಲಕ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ದೇವರು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.