• first
    second
    third
    previous arrow
    next arrow
  • ಅಕ್ಟೋಬರ್ ತಿಂಗಳ ಹಾಲಿನ ಪ್ರೋತ್ಸಾಹ ಧನ ಜಮಾ

    300x250 AD

    ಶಿರಸಿ: ಅಕ್ಟೋಬರ್ 2021 ನೇ ಮಾಹೆಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ನೀಡಲಾಗುವ ರೂ. 5 ಪ್ರೋತ್ಸಾಹಧನವು ಆಧಾರ ಜೋಡಣೆಯಾದ ಹಾಲು ಉತ್ಪಾದಕ ರೈತರ ಖಾತೆಗೆ ಫೆ.4 ರಂದು ಶುಕ್ರವಾರ ಜಮಾ ಆಗಿರುತ್ತದೆ ಎಂದು ಧಾರವಾಡ ಹಾಲು ಒಕ್ಕೂಟದ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರು ಹಾಗೂ ಒಕ್ಕೂಟದ ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ತಿಳಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಡಿಸೆಂಬರ್-2021 ರ ವರೆಗಿನ ಪ್ರೋತ್ಸಾಹಧನದ ಮಾಹಿತಿಯನ್ನು ನಮ್ಮಿಂದ ಕ್ಷೀರ ಸಿರಿ ತಂತ್ರಾಶದಲ್ಲಿ ಈಗಾಗಲೇ ಅಳವಡಿಸಲಾಗಿದ್ದು,‌ ಜನವರಿ-2022‌ ನೇ ಮಾಹೆಯ ಮಾಹಿತಿಯನ್ನು ಕ್ಷೀರಸಿರಿ ತಂತ್ರಾಂಶದಲ್ಲಿ ಅಳವಡಿಸಲು ಸೂಕ್ತ ಮಾಹಿತಿಗಳನ್ನು ಪಡೆಯಲಾಗುತ್ತಿದ್ದು ಹಾಲು ಉತ್ಪಾದಕ ರೈತರು ಹಾಲು ಸಂಘಗಳಿಗೆ ಪೂರೈಸಿದ ಹಾಲಿನ ಮಾಹಿತಿಯನ್ನು ಕ್ಷೀರಸಿರಿ ತಂತ್ರಾಂಶದಲ್ಲಿ ನಮೂದಿಸುವ ಕಾರ್ಯ ನಮ್ಮ ಜಿಲ್ಲೆಯಾದ್ಯಂತ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

    300x250 AD

    ಅಕ್ಟೋಬರ್ 2021 ರ ವರೆಗೆ ಸರ್ಕಾರದಿಂದ ಅತ್ಯಂತ ತ್ವರಿತವಾಗಿ ಪ್ರೋತ್ಸಾಹ ಧನವನ್ನು ಹಾಲು ಉತ್ಪಾದಕ ರೈತರ ಖಾತೆಗೆ ಜಮಾ ಮಾಡಲಾಗಿದ್ದು, ನವೆಂಬರ್‌-2021 ನೇ ಮಾಹೆಯ ಪ್ರೋತ್ಸಾಹಧನವು ಕೂಡ ಶೀಘ್ರದಲ್ಲೇ ರೈತರ ಖಾತೆಗೆ ಸರ್ಕಾರದಿಂದ ಜಮಾ ಆಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ಹಾಗೂ ಪ್ರೋತ್ಸಾಹಧನ ಜಮಾ ಆಗದ ರೈತರು ಆಯಾ ವ್ಯಾಪ್ತಿಯ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಿದರು.

    Share This
    300x250 AD
    300x250 AD
    300x250 AD
    Back to top