• Slide
    Slide
    Slide
    previous arrow
    next arrow
  • ಅಜಿತ್ ನಾಡಿಗ ತಂಡದಿಂದ ಹನಿಟ್ರ್ಯಾಪ್ ಪ್ರಕರಣ; ಜಿಲ್ಲಾ ವರಿಷ್ಠಾಧಿಕಾರಿ ಸುಮನ್ ಪೆನ್ನಿಕರ್ ಹೇಳಿದ್ದಿಷ್ಟು !

    300x250 AD

    ಕಾರವಾರ: ಶಿರಸಿಯಲ್ಲಿ ಹನಿಟ್ರ್ಯಾಪ್ ಪ್ರಕರಣ ದಾಖಲಾದ 24 ಘಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಈ ನಿಟ್ಟಿನಲ್ಲಿ ತನಿಖೆ ಪ್ರಾರಂಭಗೊಂಡಿದ್ದು ಆದಷ್ಟು ಶೀಘ್ರವಾಗಿ ಆರೋಪಿಗಳಿಂದ ಸತ್ಯಾಂಶ ಬಯಲಿಗೆಳೆಯಲಾಗುವುದು ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೆಕರ್ ಹೇಳಿದರು.

    ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದರು. ಪ್ರಾಥಮಿಕ ಮಾಹಿತಿ ಪ್ರಕಾರ ಫಿರ್ಯಾದಿ ಹಾಗೂ ಪ್ರಥಮ ಆರೋಪಿ ಪರಸ್ಪರ ಪರಿಚಿತರಾಗಿದ್ದು, ಮೊದಲಿನಿಂದಲೂ ಸಂಪರ್ಕದಲ್ಲಿರುವುದು ತಿಳಿದುಬಂದಿದೆ. ನಂತರದಲ್ಲಿ ಸರ್ಕಾರಿ ಉಪನ್ಯಾಸಕ ಹುದ್ದೆ ಕೊಡಿಸುವುದಾಗಿ ಹೇಳಿ ಶಿವಮೊಗ್ಗಕ್ಕೆ ಕರೆಸಿಕೊಂಡು ಕೆಲ ನಗ್ನ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಬಿಡುವುದಾಗಿ ಹೇಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದೂರಿನ ಪ್ರಕಾರ ಮೂವರು ಆರೋಪಿಗಳನ್ನು ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರು  ಆರೋಪಿಗಳನ್ನು ಬಂಧಿಸಿದ್ದಾರೆ.

    300x250 AD

    ಆರೋಪಿಗಳಾದ ಅಜಿತ್ ನಾಡಿಗ, ಧನುಷ್ ಕುಮಾರ್, ಪದ್ಮಜ ಸೇರಿ ಮೂವರನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು. ಆರೋಪಿತ ಮಹಿಳೆ ವಿದ್ಯಾವಂತೆಯಾಗಿದ್ದು ದುಡ್ಡಿನ ಅವಶ್ಯಕತೆಯಿಂದಾಗಿ ಈ ಕೃತ್ಯಕ್ಕೆ ಒಪ್ಪಿಕೊಂಡಿದ್ದಾಳೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top