ಬೆಂಗಳೂರು: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 2022 – 23 ನೇ ಸಾಲಿನ ಬಜೆಟ್ ಸಭೆಯನ್ನು ನಡೆಸಿದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಇದುವರೆಗೆ 28,94,389 ಕಾರ್ಮಿಕರು ನೋಂದಣಿಯಾಗಿದ್ದಾರೆ ಮಂಡಳಿಯಿಂದ ಕಾರ್ಮಿಕ ಕಲ್ಯಾಣಕ್ಕಾಗಿ ಒಟ್ಟು 19 ವಿವಿಧ ಯೋಜನೆಗಳನ್ನು ನೀಡಲಾಗುತ್ತಿದೆ ಈ ಬಾರಿಯ ಆಯವ್ಯಯದಲ್ಲಿ ಹೆಚ್ಚಿನ ಫಲಾನುಭವಿಗಳ ಗುರಿಯನ್ನು ಹೊಂದಲಾಗಿದೆ ಎಂದರು.
ಈ ಬಾರಿಗೆ ಬಜೆಟ್ ನಲ್ಲಿ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಅವಲಂಬಿತರು ಸ್ವ – ಉದ್ಯೋಗವನ್ನು ಕೈಗೊಳ್ಳುವ ದೃಷ್ಟಿಯಿಂದ ಹೊಲಿಗೆ ಯಂತ್ರ ನೀಡುವ ವಿನೂತನ ಯೋಜನೆಯನ್ನು ಜಾರಿಗೊಳಿಸಲಾಗಿದೆ ಈ ಯೋಜನೆಗೆ 15 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಹಾಗೂ ತಾತ್ಕಾಲಿಕ ವಸತಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತಾರಿಸುವ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿರಾದ ಗುರುಪ್ರಸಾದ, ಮಂಡಳಿಯ ಸದಸ್ಯರು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.