• Slide
    Slide
    Slide
    previous arrow
    next arrow
  • ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್ ಇನ್ನಿಲ್ಲ!

    300x250 AD

    ಮಹಾಲಿಂಗಪುರ : ಆಧುನಿಕ ಸೂಫಿಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76 ) ಅವರು ಇಂದು ಮುಂಜಾನೆ ನಿಧನ ಹೊಂದಿದರು. ಬಾಗಲಕೋಟೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಇಂದು ಬೆಳಗ್ಗೆ 6.30ರ ಸುಮಾರಿಗೆ ಅಸುನೀಗಿದರು.

    ಕಳೆದ ಮೂರ್ನಾಲ್ಕು ದಿನಗಳಿಂದ ಇಬ್ರಾಹಿಂ ಸುತಾರ್ ಹೃದಯದ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಲಘು ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಇಬ್ರಾಹಿಂ ಸುತಾರ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ.

    ಮೇ 10, 1940ರಂದು ಜನಿಸಿದ ಇಬ್ರಾಹಿಂ ಎನ್​. ಸುತಾರ್​ ಇವರ ತಂದೆ ಮಹಾಲಿಂಗಪುರದ ನಬಿಸಾಹೇಬ್​, ತಾಯಿ ಅಮೀನಾಬಿ. ಮೂರನೇ ತರಗತಿವರೆಗೆ ಶಿಕ್ಷಣ ಪಡೆದಿದ್ದ ಸುತಾರ್ ಅವರು ನಂತರ ನೇಕಾರ ವೃತ್ತಿ ಮಾಡುತ್ತಿದ್ದರು. ಮಸೀದಿಯಲ್ಲಿ ನಮಾಜು, ಕುರಾನ್​ ಅಧ್ಯಯನ ಮಾಡಿದ ಅವರು, ಬಳಿಕ ಭಗವದ್ಗೀತೆ ಅಧ್ಯಯನ ಮಾಡಿದರು.

    ಭಾವೈಕ್ಯತೆ ಹರಡುವ ಪ್ರವಚನ ಮಾಡುತ್ತಿದ್ದ ಇಬ್ರಾಹಿಂ ಸುತಾರ್ ಅವರ ಭಾಷಣಗಳನ್ನು ಕೇಳಲು ಭಾರೀ ಸಂಖ್ಯೆಯ ಜನ ಸೇರುತ್ತಿದ್ದರು. ಧರ್ಮಸ್ಥಳದಲ್ಲಿ ನಡೆದ ಸರ್ವ ಧರ್ಮ ಸಮ್ಮೇಳನದಲ್ಲಿ ಇಬ್ರಾಹಿಂ ಸುತಾರ್ ಅವರು ಮಾಡಿದ ಭಾಷಣದ ತುಣುಕು ಬಹಳ ವೈರಲ್ ಆಗಿತ್ತು.

    300x250 AD

    1995ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದ ಇಬ್ರಾಹಿಂ ಸುತಾರ್ ಅವರಿಗೆ, 2018ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

    ಸಿಎಂ ಸಂತಾಪ: ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ ಅವರು ಇಂದು ಮುಂಜಾನೆ ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ‌. ಸಮಾಜದಲ್ಲಿ ಸಾಮರಸ್ಯದ ಬೀಜ ಬಿತ್ತಲು ಶ್ರಮಿಸಿದ ಅವರ ದಿವ್ಯಾತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಸಾಮರಸ್ಯದ ಕೊಂಡಿ, ಸೌಹಾರ್ದ ಸಮಾಜದ ಪ್ರತಿಪಾದಕರು ಪದ್ಮಶ್ರೀ ಪುರಸ್ಕೃತರಾಗಿದ್ದ ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ. ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top