• Slide
  Slide
  Slide
  previous arrow
  next arrow
 • ದರ್ಗಾ ಕೆಡವಿದ ಕಿಡಿಗೇಡಿಗಳ ಪತ್ತೆಗೆ ನಾಲ್ಕು ತಂಡ ರಚನೆ;ಎಸ್ಪಿ ಸುಮನ್ ಪೆನ್ನೆಕರ್ ಪ್ರತಿಕ್ರಿಯೆ

  300x250 AD

  ಕಾರವಾರ: ತಾಲೂಕಿನ ಚಿತ್ತಾಕುಲ ವ್ಯಾಪ್ತಿಯ ಕಣಸಗೇರಿಯ ಹಜರತ್ ಸಯ್ಯದ್ ಮಾಲ್ದಾರ್ ನೂರ್ ದರ್ಗಾ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿ, ಆರೋಪಿಗಳ ಸೆರೆಗೆ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೆಕರ್ ತಿಳಿಸಿದ್ದಾರೆ.

  ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದರ್ಗಾದ ಗೋಡೆ ಮತ್ತು ಮಜರ್‍ಗಳನ್ನು ಕಿಡಿಗೇಡಿಗಳು ದುರುದ್ದೇಶ ಪೂರ್ವಕವಾಗಿ ಅಥವಾ ಜಾಗವನ್ನು ಕಬಳಿಸುವ ಉದ್ದೇಶದಿಂದ ಕೆಡವಿ, ಧ್ವಂಸಗೊಳಿಸಿದ್ದಾರೆ. ಈ ಕುರಿತು ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳಲಾಗಿದೆ. ಅಲ್ಲದೇ, ಡಿಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿ, ಮಾಹಿತಿ ಕಲೆ ಹಾಕಲಾಗುತ್ತಿದೆ. ಜಾಗಕ್ಕೆ ಸಂಬಂಧಿಸಿದಂತೆಯೂ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ದುಷ್ಕೃತ್ಯದಲ್ಲಿ ಭಾಗಿಯಾದವರನ್ನು ಶೀಘ್ರದಲ್ಲೇ ಬಂಧಿಸಿ, ತನಿಖೆ ನಡೆಸಲಾಗುತ್ತದೆ ಎಂದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top