ಕಾರವಾರ: ತಾಲೂಕಿನ ದೇವಳಮಕ್ಕಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಗುರುವಾರ ರಾಮಾನುಜನ್ ಗಣಿತ ಸಂಘದ ಆಶ್ರಯದಲ್ಲಿ ಗಣಿತ ಅಭ್ಯಾಸದ ಉಪಕರಣಗಳ ಪ್ರದರ್ಶನ ಮೇಳ ನಡೆಯಿತು.
ದೇವಳಮಕ್ಕಿ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಆದರ್ಶ ವಿದ್ಯಾಲಯದ ಮುಖ್ಯಾಧ್ಯಾಪಕಿ ವೀಣಾ ಪಿ. ನಾಯ್ಕ ಅಧ್ಯಕ್ಷತೆ ವಹಿಸಿದ್ದರು.
ಆದರ್ಶ ವಿದ್ಯಾಲಯದ ಮಾಜಿ ವಿದ್ಯಾರ್ಥಿಗಳು ನಿರ್ಣಾಯಕರಾಗಿ ಕಾರ್ಯ ನಿರ್ವಹಿಸಿದರು. ವಿದ್ಯಾಲಯದ ಸಹಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಗಣಿತ ಅಭ್ಯಾಸದ ಉಪಕರಣ ಮೇಳದ ಬಗ್ಗೆ ಗ್ರಾಮಸ್ಥರಿಂದ ಮೆಚ್ಚುಗೆ ಪಾತ್ರವಾಯಿತು