ಕಾರವಾರ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ಹಳಿಯಾಳ ಇವರ ವತಿಯಿಂದ 30ದಿನಗಳ ಹೌಸ್ ವಾಯರಿಂಗ್ ಮತ್ತು ವಿದ್ಯುತ್ ಉಪಕರಣಗಳ ದುರಸ್ತಿ ಮಾಡುವ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ.
ತರಬೇತಿಯನ್ನು ಊಟ ವಸತಿಯೊಂದಿಗೆ ನೀಡಲಾಗುವುದು. 18 ರಿಂದ 45ರ ವರ್ಷದೊಳಗಿನ ಆಸಕ್ತ ಯುವಕರು/ಯುವತಿಯರು ಫೆ. 15 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್ ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯನ್ನು ಅಥವಾ ದೂರವಾಣಿ ಸಂಖ್ಯೆ 9483485489, 9482188780, 08284-295307, 220807, 9743321062ಗೆ ಸಂಪರ್ಕಿಸಬಹುದೆಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ ನಿರ್ದೇಶಕ ಪ್ರಸನ್ನಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.