ಮುಂಬೈ: ಖ್ಯಾತ ಗಾಯಕಿ, ಭಾರತದ ಗಾನಕೋಗಿಲೆ, ಲತಾ ಮಂಗೇಶ್ವರ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರ ನಿಧನ ದೇಶವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. 92 ವರ್ಷದ ಲತಾ ಮಂಗೇಶ್ವರ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಬೈನ್ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲತಾ ಮಂಗೇಶ್ವರ್, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಜನವರಿ 8ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದ ಲತಾ ಮಂಗೇಶ್ವರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರು, ಕಳೆದ ಮೂರು ದಿನಗಳಿಂದ ಮತ್ತೆ ಅನಾರೋಗ್ಯಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಲತಾ ಮಂಗೇಶ್ಕರ್ ಅವರ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆ ನಡೆಸಲಾಗುತ್ತದೆ. ಗೌರವ ಸೂಚಕವಾಗಿ ಎರಡು ದಿನಗಳ ಕಾಲ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಸೆ. 28, 1929ರಲ್ಲಿ ಮಧ್ಯಪ್ರದೇಶದ ಇಂಧೋರ್ ನಲ್ಲಿ ಜನಿಸಿದ್ದ ಲತಾ ಮಂಗೇಶ್ವರ್ ಅವರ ತಂದೆ ಧೀನಾನಾಥ್ ಮಂಗೇಶ್ವರ್, ತಾಯಿ ಸೇವಂತಿ ಮಂಗೇಶ್ವರ್. ಲತಾ ಮಂಗೇಶ್ವರ್ ಭಾರತದ ಎಲ್ಲ ಭಾಷೆಗಳಲ್ಲಿ 36 ಸಾವಿರಕ್ಕೂ ಹೆಚ್ಚು ಗಳನ್ನು ಹಾಡಿದ್ದರು.
ಲತಾ ಮಂಗೇಶ್ವರ್ (೨೮ ಸೆಪ್ಟೆಂಬರ್ ೧೯೨೯ ೬ ಫೆಬ್ರವರಿ ೨೦೨೨) ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾಷೆಗಳಲ್ಲಿ ಹಾಡಿದ್ದಾರೆ. 1967ರಲ್ಲಿ ಬಿಡುಗಡೆಯಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕನ್ನಡ ಚಲನಚಿತ್ರದಲ್ಲಿನ “ಬೆಳ್ಳನೆ ಬೆಳಗಾಯಿತು” ಮತ್ತು “ಎಲ್ಲಾರೆ ಇರತೀರೋ ಎಂದಾರೆ ಬರತೀರೋ” ಹಾಡುಗಳನ್ನು ಹಾಡಿದ್ದಾರೆ.