ಕಾರವಾರ: ತಾಲೂಕಿನ ಶಿರವಾಡದ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ 2022-23 ನೇ ಸಾಲಿಗೆ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2021-22 ನೇ ಸಾಲಿನಲ್ಲಿ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಫೆ. 22 ರವರೆಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರವೇಶ ಪರೀಕ್ಷೆಯು ಮಾರ್ಚ 20 ರಂದು ನಡೆಸಲು ನಿಗದಿಪಡಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ಶಿರವಾಡದ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಇಲ್ಲಿ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವ ವಿಧಾನದ ಕುರಿತು ಪ್ರಾಧಿಕಾರದ ವೆಬ್‍ಸೈಟ್ keauthority-ka@nic.in ನಲ್ಲಿ ನಲ್ಲಿ ಪ್ರಚುರ ಪಡಿಸಲಾಗಿದೆ.
ಆನ್‍ಲೈನ ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ಬೇಕಾಗಿರುವ ದಾಖಲೆಗಳು, ವಿದ್ಯಾರ್ಥಿಯ ಎಸ್.ಎ.ಟಿ.ಎಸ್ (SATS) ನಂ, ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ, ಮೀಸಲಾತಿ ಪ್ರಯೋಜನಗಳನ್ನು ಕೋರಿರುವ ಪಕ್ಷದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಸ್ಥಳೀಯ ಅಭ್ಯರ್ಥಿ ಎಂದು ರುಜುವಾತು ಪಡಿಸಲು ಅಗತ್ಯವಾದ ಆಧಾರ್ ಕಾರ್ಡ್/ ರೇಷನ್ ಕಾರ್ಡ್ /ಸ್ಥಳೀಯ ಪ್ರಮಾಣ ಪತ್ರ, ವಿಶೇಷ ವರ್ಗಗಳಿಗೆ ಸಂಬಂಧಿಸಿದ ಪ್ರಮಾಣ ಪತ್ರ ಆಗಿರುತ್ತವೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಶಿರವಾಡ ಇವರ ಮೊಬೈಲ್ ಸಂಖ್ಯೆ 8762151802ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯು ತಿಳಿಸಿದೆ.