ಭಟ್ಕಳ: ಕುಂದಾಪುರದ ಸರಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿರುವ ಮುಸ್ಲೀಂ ವಿದ್ಯಾರ್ಥಿನಿಯರಿಗೆ ಕಾಲೇಜಿನಲ್ಲಿ ಪ್ರವೇಶ ನೀಡದೇ ಕಿರುಕುಳ ನೀಡುವುದನ್ನು ಖಂಡಿಸಿ ಭಟ್ಕಳದ ಮುಸ್ಲೀಂ ವಿದ್ಯಾರ್ಥಿಗಳು ಶನಿವಾರ ಮಧ್ಹಾಹ್ನ ಭಟ್ಕಳ ಉಪವಿಭಾಗಾದಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಪ್ರಾಂಶುಪಾಲರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಶನಿವಾರ ಮದ್ಯಾಹ್ನ ಭಟ್ಕಳದ ಮುಸ್ಲಿಂ ವಿದ್ಯಾರ್ಥಿಗಳ ಸಂಘಟನೆಗಳು ಹಾಗೂ ಸಾರ್ವಜನಿಕರು ಭಟ್ಕಳ ಉಪವಿಭಾಗಾದಕಾರಿಗಳ ಕಚೇರಿಗೆ ಆಗಮಿಸಿ ಹಿಜಾಬ್ ಧರಿಸುವುದು ನಮ್ಮ ಹಕ್ಕು, ನಮ್ಮ ಧರ್ಮದಲ್ಲಿ ಹಿಜಾಬ್ ಧರಿಸುವುದು ಕಡ್ಡಾಯವಾಗಿದೆ. ನಮ್ಮ ದೇಶದ ಸಂವಿಧಾನದಲ್ಲಿಯೂ ಅವರವರ ಧರ್ಮ, ಸಂಪ್ರದಾಯ ಪಾಲನೆಗೆ ಅವಕಾಶ ನೀಡಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳನ್ನು ಕಾಲೇಜಿನ ಒಳಗೆ ಬಿಡದ ಕುಂದಾಪುರ ಸರಕಾರಿ ಕಾಲೇಜಿನ ಪ್ರಾಂಶುಪಾಲರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಅಂಜುಮಾನ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.