ಕಾರವಾರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶೇ.4% ರ ಬಡ್ಡಿದರ ಸಹಾಯಧನ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಆಸಕ್ತರು ಬ್ಯಾಂಕ್‍ನ ಮುಖಾಂತರ ಸಹಾಯಧನ ಪ್ರಯೋಜನ ಪಡೆಯಬಹುದು.
ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಯೋಜನೆಯ ಬಗ್ಗೆ ಸರ್ಕಾರದ ಆದೇಶ ಹಾಗೂ ಅರ್ಜಿ ಲಭ್ಯವಿರುತ್ತದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷ್ಮಣ ಬಬಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.