• Slide
    Slide
    Slide
    previous arrow
    next arrow
  • 2021ರಲ್ಲಿ ಪ್ರಕಟಿಸಿರುವ ಯಕ್ಷಗಾನ ಕಲಾಪ್ರಕಾರದ ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ

    300x250 AD

    ಕಾರವಾರ : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2021 ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.

    ಆಯ್ಕೆಯಾದ ಪುಸ್ತಕಕ್ಕೆ ರೂ.25 ಸಾವಿರ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಪರಿಗಣಿಸಲಾಗುವುದು. ಆಯ್ಕೆಗಾಗಿ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

    ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560 002, ಇವರಿಗೆ ಫೆಬ್ರವರಿ 23 ರೊಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.

    300x250 AD

    ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ (ದೂ:08022113146) ಪಡೆಯಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top