ಶಿರಸಿ:ಮೋಡರ್ನ್ ಎಜ್ಯುಕೇಶನ್ ಸೊಸೈಟಿಯ ಎಂ.ಎಂ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಂಘ ಒಕ್ಕೂಟ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ರೆಡ್‌ಕ್ರಾಸ್, ಸೌಟ್ ಮತ್ತು ಗೈಡ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಫೆ.9 ರ ಬುಧವಾರ ಬೆಳಗ್ಗೆ 11 ಗಂಟೆಗೆ ಮೋಟಿನ್ಸರ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಎಂ.ಇ. ಎಸ್ ಅಧ್ಯಕ್ಷ ಜಿ. ಎಂ. ಹೆಗಡೆ ಮುಳಖಂಡ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕುಲಸಚಿವ ಪ್ರೊ ಎಚ್. ನಾಗರಾಜ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಜಿ.ಎಸ್. ಹೆಗಡೆ ಆಗಮಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಮಹಾವಿದ್ಯಾಲಯದ ಆಡಳಿತ ಮಂಡಳಿ, ಉಪ ಸಮಿತಿ ಸದಸ್ಯರು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ವೃಂದದವರು ಆಗಮಿಸಲು ಪ್ರಕಟಣೆ ತಿಳಿಸಿದೆ.