ಬೆಂಗಳೂರು: ಹಿಜಾಬ್ ಕೇಸರಿ ಶಾಲು ವಿವಾದ ಜೋರಾದ ಬೆನ್ನಲ್ಲೆ, ರಾಜ್ಯಾದ್ಯಂತ ನಾಳೆಯಿಂದ ಮೂರು ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ. ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.