ಕಾರವಾರ: ವ್ಯಾಲೆಂಟೈನ್ ಡೇ’ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯುವ ಮತ್ತು ಅದರ ಮೇಲೆ ಉಪಾಯ ಯೋಜನೆ ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.
14 ಫೆಬ್ರವರಿಯಂದು `ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ಧೇಶದಿಂದ ಪಾಶ್ಚಾತ್ಯರ ಈ ಅಂದಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ ಕಾರಣವಾಗುತ್ತಿದೆ. ಪಾಶ್ಚಾತ್ಯರ ಈ ವ್ಯಾಲೆಂಟೈನ್ ದಿನ ಯುವತಿಯರನ್ನು ಪೀಡಿಸುವ ಮತ್ತು ಅವರಿಗೆ ಹಿಂಸೆ ನೀಡುವ, ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುವ ದಿನವನ್ನಾಗಿ ಆಚರಿಸುತ್ತಿರುವುದು ಖೇಧದ ಸಂಗತಿಯಾಗಿದೆ. ಈ ದಿನ ಪಾರ್ಟಿಯ ಹೆಸರಿನಲ್ಲಿ ಯುವಕ ಯುವತಿಯರು ಮದ್ಯಪಾನ, ದೂಮಪಾನ ಮಾಡುವುದು, ಡ್ರಗ್ ಮಾಪಿಯಾದಂತಹ ಕೃತ್ಯಗಳಿಗೆ ಬಲಿಯಾಗುವುದು ಮುಂತಾದ ಅನುಚಿತ ಘಟನೆಗಳ ಪ್ರಮಾಣ ಹೆಚ್ಚಳವಾಗುತ್ತಿದೆ.
ಇದರ ತಡೆಗಾಗಿ ಹಿಂದೂ ಜನಜಾಗೃತಿ ಸಮಿತಿಯು ಇಂದು ಉತ್ತರಕನ್ನಡ ಜಿಲ್ಲೆಯ ಉಪ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಕೆಳಗಿನ ಬೇಡಿಕೆಯ ಮೂಲಕ ಮನವಿಯನ್ನು ನೀಡಲಾಯಿತು.
- ವ್ಯಾಲೆಂಟೈನ್ ದಿನದಂದು ವಿಶೇಷ ಪೋಲಿಸ್ ದಳ ರಚಿಸಿ ಶಾಲಾ-ಕಾಲೇಜುಗಳಲ್ಲಿ ಅನುಚಿತ ಕೃತ್ಯ ಮಾಡುವವರ ಮೇಲೆ, ವೇಗದಿಂದ ವಾಹನ ಓಡಿಸುವವರ ಮೇಲೆ ಕ್ರಮ ಜರುಗಿಸಬೇಕು.
- ಪ್ರೇಮಿಗಳ ದಿನದಂದು ನಡೆಯುವ ತಪ್ಪು ಪ್ರಕಾರಗಳನ್ನು ಗಮನದಲ್ಲಿರಿಸಿ ಪಾರ್ಕ್, ಮುಂತಾದ ಸ್ಥಳಗಳಲ್ಲಿ ಅಯೋಗ್ಯ ಕೃತಿಗಳನ್ನು ತಡೆಯಬೇಕು
- ಮಹಿಳೆಯ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಘಟನೆಗಳನ್ನು ತಡೆಯಲು ಡೇ ಸಂಸ್ಕೃತಿಯನ್ನು ನಿಲ್ಲಿಸಲು ಮತ್ತು ಇಂತಹ ಅಯೋಗ್ಯ ಆಚರಣೆಗಳಿಗೆ ಪ್ರೋತ್ಸಾಹ ನೀಡದಂತೆ ಶಾಲಾ ಕಾಲೇಜುಗಳಿಗೆ ನಿರ್ದೇಶನ ನೀಡಬೇಕು ಎಂದು ತಿಳಿಸಲಾಯಿತು.
ಈ ಸಂಧರ್ಭದಲ್ಲಿ ಹಿಂದುತ್ವನಿಷ್ಠರಾದ ಬಾಬು ಅಂಬಿ, ವಿನಾಯಕ್ ಸಾವಂತ್, ಪ್ರಶಾಂತ್ ಪೆಡ್ನೆಕರ್, ಮಂಗೇಶ್ ಪರುಳೇಕರ್ ಹಿಂದೂ ಜನಜಾಗೃತಿ ಸಮಿತಿಯ ಸಾಗರ್ ಕುರ್ಡೆಕರ ಮುಂತಾದವರು ಉಪಸ್ಥಿತರಿದ್ದರು.