• Slide
    Slide
    Slide
    previous arrow
    next arrow
  • ಜಮ್ಮು-ಕಾಶ್ಮೀರದಲ್ಲಿ ಸಿಂಗಲ್ ವಿಂಡೋ ಕ್ಲಿಯರೆನ್ಸ್ ಸಿಸ್ಟಮ್‌ಗೆ ಚಾಲನೆ

    300x250 AD

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಹೂಡಿಕೆದಾರರು ಅಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಅಲ್ಲಿನ ಆಡಳಿತ ಕೂಡ ಹೂಡಿಕೆಯನ್ನು ಆಕರ್ಷಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.‌

    ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು & ಕಾಶ್ಮೀರ್ ಸಿಂಗಲ್ ವಿಂಡೋ ಕ್ಲಿಯರೆನ್ಸ್ ಸಿಸ್ಟಮ್‌- www.singlewindow.jk.gov.in ಅನ್ನು ಪ್ರಾರಂಭಿಸಿದ್ದಾರೆ.

     ಜಮ್ಮು ಮತ್ತು ಕಾಶ್ಮೀರದಲ್ಲಿ ಹೂಡಿಕೆಗೆ ಅನುಕೂಲವಾಗುವಂತೆ ಸಿಂಗಲ್ ವಿಂಡೋ ಕ್ಲಿಯರೆನ್ಸ್ ಸಿಸ್ಟಮ್ ಅನ್ನು ಅಲ್ಲಿನ ಸರ್ಕಾರ ಜಾರಿಗೆ ತಂದಿರುವುದು ಐತಿಹಾಸಿಕ ಕ್ರಮವೆಂದು ವಿಶ್ಲೇಷಿಸಲಾಗಿದೆ. ಏಕ ಗವಾಕ್ಷಿ ವ್ಯವಸ್ಥೆಯಲ್ಲಿ 130 ಕೈಗಾರಿಕಾ ಸೇವೆಗಳನ್ನು ಆನ್‌ಲೈನ್‌ ಮಾಡಲಾಗಿದೆ ಮತ್ತು ಈ ವರ್ಷ 160 ಕ್ಕೂ ಹೆಚ್ಚು ಸೇವೆಗಳನ್ನು ಸಂಯೋಜಿಸಲಾಗುತ್ತಿದೆ.

    300x250 AD

    ಜಮ್ಮು ಮತ್ತು ಕಾಶ್ಮೀರದಲ್ಲಿ ಸಮಾಜದ ಎಲ್ಲಾ ವರ್ಗಗಳಿಗೆ ಪ್ರಯೋಜನಗಳನ್ನು ನೀಡುವ ರೀತಿಯಲ್ಲಿ ಕೈಗಾರಿಕಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಸರ್ಕಾರದ ಬದ್ಧತೆಯನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪುನರುಚ್ಚರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಏಕ ಗವಾಕ್ಷಿ ವ್ಯವಸ್ಥೆಯೊಂದಿಗೆ ಸಂಯೋಜಿಸಲ್ಪಟ್ಟ ಮೊದಲ ಕೇಂದ್ರಾಡಳಿತ ಪ್ರದೇಶ ಆಗಿದೆ.

    ಈಗ ಜಾಗತಿಕ ಹೂಡಿಕೆದಾರರು ರಾಷ್ಟ್ರೀಯ ಏಕ ಗವಾಕ್ಷಿ ವ್ಯವಸ್ಥೆಯ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಎಲ್ಲಾ ವ್ಯಾಪಾರ ಅನುಮೋದನೆಗಳಿಗೆ ಅರ್ಜಿ ಸಲ್ಲಿಸಬಹುದು.

    Share This
    300x250 AD
    300x250 AD
    300x250 AD
    Leaderboard Ad
    Back to top