ಕಾರವಾರ: ಜಿಲ್ಲಾ ಪಂಚಾಯತಿ ಉತ್ತರ ಕನ್ನಡ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉತ್ತಮ ಸಾಧನೆಗೈದ ಗ್ರಾಮ ಪಂಚಾಯತಿ, ಅಧಿಕಾರಿ, ಸಿಬ್ಬಂದಿ ಹಾಗೂ ಅನುಷ್ಠಾನ ಇಲಾಖೆಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ಜಿ.ಪಂ ಆವರಣದಲ್ಲಿ ಫೆ.11ರ ಶುಕ್ರವಾರ ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ಜಿ.ಪಂ ಸಿಇಓ ಎಂ.ಪ್ರಿಯಾಂಗಾ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಲಿದ್ದು, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉಪಸ್ಥಿತಿ ಇರಲಿದ್ದಾರೆ. ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರಸಭೆಯ ಅಧ್ಯಕ್ಷ ಡಾ.ನಿತಿನ್ ಪಿಕಳೆ ಸೇರಿದಂತೆ ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.