ಭಟ್ಕಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸರ್ವ ಸದಸ್ಯರ ವರ್ಚುವಲ್ ಸಭೆ ಫೆ.20 ರಂದು ಬೆಳಿಗ್ಗೆ 11 ಕ್ಕೆ ಶಿವಮೊಗ್ಗ ನಗರದ ದ್ವಾರಕ ಕನ್ವೇಷನ್ ಹಾಲ್ ನಲ್ಲಿ ನಡೆಯಲಿದೆ.
ಸಂಘದ ರಾಜ್ಯ ಅದ್ಯಕ್ಷ ಸಿ.ಎಸ್.ಷಡಾಕ್ಷರಿ ಆಧ್ಯಕ್ಷತೆ ವಹಿಸಲಿದ್ದಾರೆ. ಸಂಘವು 2012 ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು ಬೆಂಗಳೂರಿನ ಸಂಘಗಳ ಜಿಲ್ಲಾ ನೊಂದಣಾಧಿಕಾರಿಗಳ ಸೂಚಿನೆ ಮೇರೆಗೆ ಸದಸ್ಯರು ವಾಸ್ತವ/ವರ್ಚುವಲ್ ವಿಧಾನದ ಮೂಲಕ ವಿಶೇಷ ಮಹಾಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಂಘದ ತಾಲೂಕಾಧ್ಯಕ್ಷ ಮೋಹನ ನಾಯ್ಕ ತಿಳಿಸಿದ್ದಾರೆ.