ಕಾರವಾರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2021-22 ನೇ ಸಾಲಿಗೆ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯ, ದೌರ್ಜನ್ಯ ಸಂತ್ರಸ್ತರು, ಮಾಜಿದೇವದಾಸಿ, ಅಂತರ್ಜಾತಿ ವಿವಾಹಿತ ದಂಪತಿ, ವಿಧವೆಯರು/ ಒಂಟಿ ಮಹಿಳೆಯರು, ಮೀನುಗಾರರಿಗೆ, ವಸತಿ ರಹಿತ ನಿವೇಶನ(ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ(ವಸತಿ) ನಿರ್ಮಾಣ ಯೋಜನೆಯಡಿಯಲ್ಲಿ ವಸತಿ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿದೆ.
ಆಫ್‍ಲೈನ್ ಅರ್ಜಿ ಸಲ್ಲಿಸಲು ಫೆ. 25 ಹಾಗೂ ಆನ್‍ಲೈನ್ ಮೂಲಕ ಸಲ್ಲಿಸಲು ಫೆ. 28 ಕೊನೆಯ ದಿನವಾಗಿರುತ್ತದೆ. ವೆಬ್ ಸೈಟ್ www.karnataka.gov.in/kmvstdcl. ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು.
ಅರ್ಜಿದಾರರು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಟ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, 18 ವರ್ಷಮೇಲ್ಪಟ್ಟವರಾಗಿರಬೇಕು.
ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ. 98,ಸಾವಿರ – ಹಾಗೂ ನಗರ ಪ್ರದೇಶವಾದಲ್ಲಿ ರೂ 1,2. ಲಕ್ಷ ಮಿತಿಯೊಳಗಿರಬೇಕು. ಕುಟಂಬದ ಯಾವುದೇ ಸದಸ್ಯರು ಸರ್ಕಾರಿ / ಅರೆ ಸರ್ಕಾರ ಸಂಸ್ಧೆಯಲ್ಲಿ ನೌಕರಿಯಲ್ಲಿರಬಾರದು.
ಆಸಕ್ತ ಅರ್ಹ ಆಕಾಂಕ್ಷಿಗಳು ಸಲ್ಲಿಸಬೇಕಾದ ದಾಖಲಾತಿಗಳು ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರ. ಜಾತಿ ಪ್ರಮಾಣ ಪತ್ರ , ಕುಟುಂಬದ ವಾರ್ಷಿಕ ವರಮಾನ ಪತ್ರ, ಪಡಿತರ ಚೀಟಿ / ಆಧಾರ್ ಕಾರ್ಡ್/ ಮತದಾರರ ಗುರುತಿನ ಚೀಟಿ. ಅರ್ಜಿದಾರರು ಹೊಂದಿರುವ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ ಬುಕ್‍ನ ಮೊದಲ ಪುಟದ ಪ್ರತಿ. ನಿರಾಪೇಕ್ಷಣಾ ಪತ್ರ, ಖಾತೆ, ಸೈಟ್/ ನಿವೇಶನಕ್ಕೆ ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ಹಳೆ ಜಿಲ್ಲಾ ಪಂಚಾಯತ್ ಕಟ್ಟಡ, ನೆಲಮಹಡಿ, ತಹಸೀಲ್ದಾರ ಕಚೇರಿ ಹಿಂಬಾಗ, ಕಾರವಾರ ದೂರವಾಣಿ ಸಂಖ್ಯೆ: 08382-226903 ಸಂಪರ್ಕಿಸಬಹುದು. ಅರ್ಜಿಗಳನ್ನುಸಲ್ಲಿಸಲು ನಿಗದಿಪಡಿಸಿದ ದಿನಾಂಕದ ನಂತರ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಮತ್ತು ಆಯಾ ತಾಲೂಕಾ ಸಮಾಜ ಕಲ್ಯಾಣ ಇಲಾಖೆಯಲ್ಲೂ ಸಹಾ ಮಾಹಿತಿ ಪಡೆದು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.