ಭಟ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ಇಲ್ಲಿನ ಕೋಣಾರ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಸೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವನನ್ನು ಮಂಜುನಾಥ ಸೋಮಯ್ಯ ಗೊಂಡ (29) ಎಂದು ಗುರುತಿಸಲಾಗಿದೆ. ಈತ ಕೂಲಿ ಕೆಲಸ ಮಾಡಿಕೊಂಡಿದ್ದು, ಕುಡಿತದ ಚಟ ಹೊಂದಿದ್ದು ಮನೆಯ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.