
ಯಲ್ಲಾಪುರ: ಜು.19 ಸೋಮವಾರ ಮತ್ತು 22 ಗುರುವಾರದಂದು ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವಭಾವಿ ಸಭೆಯನ್ನು ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಈ ಸಭೆಯಲ್ಲಿ ಉಪಸ್ಥಿತರಿದ್ದ ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿನ ಮುಂಜಾಕ್ರತಾ ಕ್ರಮಗಳ ಬಗ್ಗೆ ಹಾಗೂ ಪರೀಕ್ಷಾ ಸಿದ್ಧತೆಗಳ ಮಾಹಿತಿ ನೀಡಿದರು. ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ್ ಮಾತನಾಡಿ ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ನಿಯಮಾವಳಿಯನ್ನು ಪಾಲಿಸಲು ಸೂಚಿಸಿದರು.
ತಾಲೂಕಿನಲ್ಲಿ 8 ಪರಿಕ್ಷಾ ಕೇಂದ್ರಗಳಿದ್ದು 696 ವಿಧ್ಯಾರ್ಥಿಗಳು ಹಾಗೂ 516 ವಿದ್ಯಾರ್ಥಿನಿಯರು, (61 ರಿಪಿಟರ್ಸ ಸೇರಿದಂತೆ) ಒಟ್ಟೂ 1212 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ 249 ಪರೀಕ್ಷಾ ನಿರ್ವಹಣಾ ಸಿಬ್ಬಂದಿಗಳನ್ನು ನೇಮಿಸಲಾಗಿದೆ.
ವಾಯ್.ಟಿ.ಎಸ್.ಎಸ್. ಆಂಗ್ಲಮಾಧ್ಯಮ ಶಾಲೆಯಲ್ಲಿ 251, ಕಾಳಮ್ಮನಗರದ ಸರಕಾರಿ ಪ್ರೌಢ ಶಾಲೆಯಲ್ಲಿ 118, ವಿಶ್ವದರ್ಶನ ಆಂಗ್ಲಮಾಧ್ಯಮ ಶಾಲೆಯಲ್ಲಿ 160, ಮದರ್ ಥೆರೆಸಾ ಆಂಗ್ಲಮಾಧ್ಯಮ ಶಾಲೆಯಲ್ಲಿ 124, ಯಲ್ಲಾಪುರದ ಸರಕಾರಿ ಪದವಿಪೂರ್ವ ಕಾಲೇಜು ಕೇಂದ್ರದಲ್ಲಿ 92, ಮಂಚೀಕೇರಿ ರಾಜರಾಜೇಶ್ವರಿ ಪ್ರೌಢ ಶಾಲೆಯಲ್ಲಿ 172, ವಜ್ರಳ್ಳಿ ಸರ್ವೊದಯ ಪ್ರೌಢ ಶಾಲೆಯಲ್ಲಿ 109, ಕಿರವತ್ತಿಯ ಸರಕಾರಿ ಪ್ರೌಢ ಶಾಲೆಯಲ್ಲಿ 186 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಮಾಹಿತಿ ನೀಡಿದರು.
ಸಭೆಯಲ್ಲಿ ಪರಿಕ್ಷಾ ಕೇಂದ್ರಗಳ ಮುಖ್ಯಸ್ಥರು, ಆರೋಗ್ಯ ಇಲಾಖೆ, ಪೆÇೀಲೀಸ್ ಇಲಾಖೆ, ನೋಡಲ್ ಅಧಿಕಾರಿಗಳು ಭಾಗವಹಿಸಿದ್ದರು