ಕುಮಟಾ : ಪ್ರಸಕ್ತ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕುಮಟಾ ತಾಲೂಕಿನ ದೇವಗಿರಿ ಗ್ರಾ.ಪಂಗೆ “ನರೇಗಾ ಪುರಸ್ಕಾರ” ದೊರೆತಿದೆ.
ಕಾರವಾರದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ನಡೆದ ಪುರಸ್ಕಾರ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕುಮಟಾ ತಾಲೂಕಿನ ದೇವಗಿರಿ ಗ್ರಾಮ ಪಂಚಾಯತಕ್ಕೆ “ನರೇಗಾ ಪುರಸ್ಕಾರ” ನೀಡಲಾಯಿತು. ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಪ್ರಶಸ್ತಿ ಪ್ರಧಾನ ಮಾಡಿದರು. ದೇವಗಿರಿ ಗ್ರಾಪಂ ಅಧ್ಯಕ್ಷೆ ರತ್ನಾ ಹರಿಕಂತ್ರ, ಉಪಾಧ್ಯಕ್ಷ ಎಸ್ ಟಿ ನಾಯ್ಕ, ಗ್ರಾಪಂ ಅಭಿವೃದ್ಧಿ ಅಧಿಕಾರಿ ವಿನಯಕುಮಾರ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್ ವಿ ಸಂಕನೂರು, ಗಣಪತಿ ಉಳ್ವೇಕರ ಶಾಸಕರಾದ ದಿನಕರ ಶೆಟ್ಟಿ, ರೂಪಾಲಿ ನಾಯ್ಕ ಹಾಗೂ ಇತರರಿದ್ದರು.