ಕಾರವಾರ: ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರಿಗೆ ಅತಿವೇಗವಾಗಿ ಬಂದ ಇನ್ನೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾದ ಘಟನೆ ತಾಲೂಕಿನ ಬೈರಾ ಬಳಿ ಶನಿವಾರ ನಡೆದಿದೆ.
ಬೈರಾ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಅತಿವೇಗದಿಂದ ಬಂದ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಎರಡೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ಕದ್ರಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.