ಭಟ್ಕಳ:ನಗರದ ಆಸರಕೇರಿಯ ನಾಮಧಾರಿ ಗುರುಮಠದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನದಂತೆ ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ಭಕ್ತಾದಿಗಳು ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿ ಸತ್ಯನಾರಾಯಣ ದೇವರ ಸಮ್ಮುಖದಲ್ಲಿ ಸಾಮೂಹಿಕವಾಗಿ ಸಂಕಲ್ಪವನ್ನು ಮಾಡಿ ದೇವರಿಗೆ ಪೂಜೆ ಸಲ್ಲಿಸಲಾಯಿತು.
ಪ್ರಧಾನ ಅರ್ಚಕ ಮುರುಳಿ ಅಯ್ಯಂಗಾರ ಸತ್ಯನಾರಾಯಣ ದೇವರ ವೃತದ ಕಥೆಯ ವಿವರ ಹಾಗೂ ಮಹತ್ವವನ್ನು ಭಕ್ತರಿಗೆ ತಿಳಿಸಿದರು. ಸತ್ಯನಾರಾಯಣ ದೇವರಿಗೆ ಮಹಾಪೂಜೆ ನೆರವೇರಿಸಲಾಯಿತು. ನಂತರ ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಗುರುಮಠ ಶ್ರೀ ನಿಚ್ಚಲಮಕ್ಕಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೃಷ್ಣ ನಾಯ್ಕ, ಉಪಾಧ್ಯಕ್ಷರಾದ ಭವಾನಿಶಂಕರ ನಾಯ್ಕ,ಕಾರ್ಯದರ್ಶಿ ಮಾಸ್ತಿ ನಾಯ್ಕ ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಸಾಮೂಹಿಕ ಸತ್ಯನಾರಾಯಣ ಪೂಜೆಯ ಪ್ರಯುಕ್ತ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸ್ಥಳೀಯ ಆಸರಕೇರಿ ವೆಂಕಟೇಶ್ವರ ಯುವಕ ಸಂಘದ ಸದಸ್ಯರು ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನೂಕೂಲವಾಗುವಂತೆ ಸಹಕರಿಸಿದರು.