ಕಾರವಾರ: ಕೋವಿಡ್ 19 ಮೂರನೇ ಅಲೆಯು ತ್ವರಿತಗತಿಯಲ್ಲಿ ಉಲ್ಬಣಗೊಳ್ಳುತ್ತಿರುವುದರಿಂದ ಹಿರಿಯ ನಾಗರಿಕರ ಆರೋಗ್ಯ ಮತ್ತು ಆರೈಕೆಯಲ್ಲಿ ಪರಿಣಾಮ ಬೀರಬಹುದು ಎಂಬ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ ಟೋಲ್ ಫ್ರೀ ಸಂಖ್ಯೆ 14567 ಆರಂಭಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರು ಟೋಲ್ ಫ್ರೀ ಸಂಖ್ಯೆ 14567ಕ್ಕೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.