ಹೊನ್ನಾವರ : ತಾಲ್ಲೂಕಿನ ಕಾಸರಕೋಡ ರೋಷನ್ ಮೊಹಲ್ಲಾದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿ ಹೋಡೆದ ಪರಿಣಾಮ ವಾಹನದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಆರೋಪಿತ ಚಾಲಕ ಶಂಕರ ಜೋದಾವರ ಬುಲೇರೋ ಜೀಪ್ ನ್ನು ಭಟ್ಕಳ ಕಡೆಯಿಂದ ಹೊನ್ನಾವರ ಕಡೆಗೆ ಅತೀವೇಗ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದು ಕಾಸರಕೋಡ ರೊಷನಮುಲ್ಲಾ ಸಮೀಪ ಡಿವೈಡರಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ವಾಹನ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದು ವಾಹನದಲ್ಲಿ ಎಲ್ಲರಿಗೂ ಗಂಭೀರ ಪೆಟ್ಟಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಜಯಪುರ ಜಿಲ್ಲೆಯ 37 ವರ್ಷದ ಗಾಯತ್ರಿ ಸೋಮೇಶ ಹೆರಳಗಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಒಟ್ಟು ಮೂರು ಜನ ಮಹಿಳೆಯರು, ಮೂವರು ಪುರುಷರು ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಉಳಿದರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಒದಗಿಸಲಾಗಿದೆ. ಈ ಕುರಿತು ಹೊನ್ನಾವರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.