• Slide
    Slide
    Slide
    previous arrow
    next arrow
  • ಉಕ್ರೇನ್‌ನಲ್ಲಿರುವ ಭಾರತೀಯರಿಗಾಗಿ 24-ಗಂಟೆಗಳ ಸಹಾಯವಾಣಿ ಆರಂಭ

    300x250 AD

    ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾ ದಾಳಿ ನಡೆಸುವ ಸಾಧ್ಯತೆ ಯ ಹಿನ್ನೆಲೆಯಲ್ಲು ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಉಕ್ರೇನ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ನಿನ್ನೆ ಸಲಹೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಲ್ಲದೇ ರಾಯಭಾರ ಕಚೇರಿಯು ಅಲ್ಲಿನ ಸಂಪೂರ್ಣ ಬೆಳವಣಿಗೆಗಳ ಮೇಲ್ವಿಚಾರಣೆಯನ್ನು ಮುಂದುವರೆಸಿದೆ.

    ಅನೇಕ ಭಾರತೀಯ ವಿದ್ಯಾರ್ಥಿಗಳು ಪ್ರಸ್ತುತ ಉಕ್ರೇನ್‌ನಲ್ಲಿದ್ದಾರೆ ಮತ್ತು ಅವರ ಕುಟುಂಬಗಳು ತಮ್ಮವರ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವಿಶೇಷವಾಗಿ ಭಾರತಕ್ಕೆ ವಿಮಾನಗಳು ಸಿಗುತ್ತದೆಯೋ ಇಲ್ಲವೋ ಎಂಬ ಆತಂಕದಲ್ಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

    ಭಾರತ ಮತ್ತು ಉಕ್ರೇನ್ ನಡುವಿನ ವಿಮಾನಗಳ ಸಂಖ್ಯೆಯನ್ನು ಹೇಗೆ ಹೆಚ್ಚಿಸುವುದು ಎಂಬುದರ ಕುರಿತು ನಾಗರಿಕ ವಿಮಾನಯಾನ ಅಧಿಕಾರಿಗಳು ಮತ್ತು ವಿವಿಧ ವಿಮಾನಯಾನ ಸಂಸ್ಥೆಗಳೊಂದಿಗೆ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಉಕ್ರೇನ್‌ನಲ್ಲಿರುವ ಭಾರತೀಯ ಪ್ರಜೆಗಳು ಮತ್ತು ಭಾರತದಲ್ಲಿನ ಅವರ ಕುಟುಂಬಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ರಾಯಭಾರ ಕಚೇರಿಯಲ್ಲಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.

    300x250 AD

    ಉಕ್ರೇನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು 24-ಗಂಟೆಗಳ ಸಹಾಯವಾಣಿಯನ್ನು ಸ್ಥಾಪಿಸಿದೆ, ಅದೆಂದರೆ 380 997300428 ಮತ್ತು 380 997300483 . ಇಮೇಲ್ ಐಡಿ cons1.kyiv@mea.gov.in ಮತ್ತು ವೆಬ್‌ಸೈಟ್ www.eoiukraine.gov.in ಆಗಿದೆ

    Share This
    300x250 AD
    300x250 AD
    300x250 AD
    Leaderboard Ad
    Back to top