ಯಲ್ಲಾಪುರ: ವಿಸ್ತಾರಕರಾಗಿ ಕಾರ್ಯ ನಿರ್ವಹಿಸಲಿರುವ ಕಾರ್ಯಕರ್ತರು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಪಕ್ಷದ ಬೆಳವಣಿಗೆಗೆ ಸಹಕಾರಿಯಾಗಬೇಕೆಂದು ಬಿಜೆಪಿಯ ವಿಭಾಗೀಯ ಸಹ ಪ್ರಭಾರಿ ಎನ್.ಎಸ್.ಹೆಗಡೆ ಹೇಳಿದರು.
ಅವರು ಪಟ್ಟಣದ ಅಡಕೆ ಭವನದಲ್ಲಿ ಬಿಜೆಪಿಯ ವಿಸ್ತಾರಕರ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ ಕಾರ್ಯಾಗಾರ ಉದ್ಘಾಟಿಸಿದರು. ನಂತರ ಪಕ್ಷದ ಸಂಘಟನಾತ್ಮಕ ವಿಷಯದ ಕುರಿತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.
ಬಿಜೆಪಿಯ ಯಲ್ಲಾಪುರ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕಾರ ಇದ್ದರು. ಪ್ರಧಾನ ಕಾರ್ಯದರ್ಶಿಗಳಾದ ಡಾ. ರವಿ ಭಟ್ಟ ಬರಗದ್ದೆ, ಪ್ರಸಾದ್ ಹೆಗಡೆ ನಿರ್ವಹಿಸಿದರು.