ಭಟ್ಕಳ: ಮಾವಿನಕುರ್ವೆ ಬಂದರಿನಲ್ಲಿ ಮೀನುಗಾರಿಕೆಯನ್ನು ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವನ ಸಾಗಿಸುತ್ತಿದೆ. ಮೀನುಗಾರಿಕೆ ಬಂದರಿನಲ್ಲಿ ಸಂಪೂರ್ಣ ಹೂಳು ತುಂಬಿ ಬೋಟ್ ಗಳನ್ನು ನಿಲ್ಲಿಸಲು ಕಷ್ಟವಾಗುತ್ತಿದೆ.ಈ ಎಲ್ಲಾ ಕಾರಣಗಳಿಂದ ಬಂದರ್ ನಲ್ಲಿ ಡ್ರಜ್ಜಿಂಗ್ ಮೂಲಕ ಹೂಳೆತ್ತುವ ಅನಿವಾರ್ಯತೆಯ ಬಗ್ಗೆ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡಲಾಯಿತು.
ಧನಾತ್ಮಕವಾಗಿ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳು ಅನುದಾನವನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವ ವಚನ ನೀಡಿದರು.
ಈ ಸಂದರ್ಭದಲ್ಲಿ ಮೀನುಗಾರ ಮುಖಂಡರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.