• Slide
    Slide
    Slide
    previous arrow
    next arrow
  • ಭುಗಿಲೆದ್ದ ಹಿಜಾಬ್ ವಿವಾದ; ಶಿರಸಿಯಲ್ಲಿ ಸೆ.144 ನಿಷೇಧಾಜ್ಞೆ ಜಾರಿ

    300x250 AD

    ಶಿರಸಿ: ತಾಲೂಕಿನಲ್ಲಿ ಹಿಜಾಬ್  ಧರಿಸಿಕೊಂಡು ಕಾಲೇಜಿಗೆ ಬರುವುದರ ಬಗ್ಗೆ ವಿವಾದ ನಡೆಯುತ್ತಿದ್ದು, ಮತೀಯ ಕೋಮು ಗಲಭೆ ಉಂಟಾಗುವ ಸಾಧ್ಯತೆಯ ಹಿನ್ನಲೆಯಲ್ಲಿ ಮುಂದಿನ ಆದೇಶದವರೆಗೆ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ತಾಲೂಕಾ ದಂಡಾಧಿಕಾರಿ ಎಮ್ ಆರ್ ಕುಲಕರ್ಣಿ ಆದೇಶ ಹೊರಡಿಸಿದ್ದಾರೆ.

    ಅದರನ್ವಯ ಶಿರಸಿ ತಾಲೂಕು ವ್ಯಾಪ್ತಿಯಲ್ಲಿ
    1. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗಣಿಗಳು, ಬಂದೂಕುಗಳು, ಚಾಕುಗಳು, ಕೋಲುಗಳು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರೇ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

    2) ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ದುವುದನ್ನು ನಿಷೇಧಿಸಲಾಗಿದೆ.

    3) ಕಲ್ಲುಗಳನ್ನು ಅಥವಾ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.

    300x250 AD

    4) ವ್ಯಕ್ತಿಗಳ ಅಥವಾ ಶವಗಳ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದು ವಿಧಿಸಲಾಗಿದೆ.

    5) ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯ, ದೇಶದ ಭದ್ರತೆಯನ್ನು ಕುಗ್ಗಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ರಾಷ್ಟ್ರೀಯ ಭಾವೈಕ್ಯತೆಗೆ ಕುಂದುಂಟಾಗುವ ಹಾಡುಗಳನ್ನು ಹಾಡುವುದು, ಆವೇಷಭರಿತ ಬಾಷಣ ಮಾಡುವುದನ್ನು ನಿಷೇಧಿಸಲಾಗಿದೆ.

    6. ಎಲ್ಲಾ ಪದವಿ, ಪದವಿಪೂರ್ವ ಹಾಗು ಹೈಸ್ಕೂಲ್ ಗಳ 200 ಮೀ ವ್ಯಾಪ್ತಿಯಲ್ಲಿ ಯಾವುದೇ ಘೋಷಣೆ, ಗುಂಪುಗಾರಿಕೆ, ಧಾರ್ಮಿಕ ಭಾವನೆಗೆ ಧಕ್ಕೆ ಬರುವಂತಹ ಯಾವುದೇ ಕೃತ್ಯವನ್ನು ಮಾಡದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top