ಶಿರಸಿ: ಸಚಿವ ಈಶ್ವರಪ್ಪ ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ರಾಷ್ಟ್ರಧ್ವಜದ ಬಗ್ಗೆ ಅಸಂವಿಧಾನಿಕ ಹೇಳಿಕೆ ನೀಡಿದ್ದಲ್ಲದೆ ಸದನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದನ್ನು ಖಂಡಿಸಿ ಉತ್ತರ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಫೆ.18, ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಶಿರಸಿ ಬಸ್ ಸ್ಟ್ಯಾಂಡ್ ಸರ್ಕಲ್ ಎದುರುಗಡೆಯಿಂದ ಶಿರಸಿಯ ಬಿಜೆಪಿ ಕಚೇರಿಯವರೆಗೆ ಮೆರವಣಿಗೆ ಮುಖಾಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಮೆರವಣಿಗೆಗೆ ಪಕ್ಷದ ಎಲ್ಲಾ ಪದಾಧಿಕಾರಿಗಳು ಎಲ್ಲಾ ಬ್ಲಾಕ್ ಅಧ್ಯಕ್ಷರು ಹಾಗೂ ಕಮಿಟಿಯ ಎಲ್ಲಾ ಸದಸ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕಾಗಿ ಅಧ್ಯಕ್ಷರು ಉತ್ತರ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂತೋಷ್ ಕೆ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.18 ಕ್ಕೆ ಈಶ್ವರಪ್ಪ ಹೇಳಿಕೆ ಖಂಡಿಸಿ ಶಿರಸಿಯಲ್ಲಿ ಯುವಕಾಂಗ್ರೆಸ್ ಪ್ರತಿಭಟನೆ
