• first
    second
    third
    previous arrow
    next arrow
  • ನಾಡುಮಾಸ್ಕೇರಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಅರ್ಜಿ ಸಲ್ಲಿಸಲು ಫೆ.22 ಕೊನೆಯ ದಿನ

    300x250 AD

    ಕಾರವಾರ: ಕುಮಟಾ ತಾಲೂಕಿನ ಗೋಕರ್ಣ ಹೋಬಳಿಯ ನಾಡುಮಾಸ್ಕೇರಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಆಂಗ್ಲ ಮಾಧ್ಯಮ ಶಾಲೆಗೆ 2022-23 ನೇ ಸಾಲಿಗೆ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

    2021-22 ನೇ ಸಾಲಿನಲ್ಲಿ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಫೆ. 22 ರವರೆಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಪ್ರವೇಶ ಪರೀಕ್ಷೆಯು ಮಾರ್ಚ 20 ರಂದು ನಡೆಸಲು ನಿಗದಿಪಡಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ,ಕುಮಟಾ ತಾಲೂಕಿನ ಗೋಕರ್ಣ ಹೋಬಳಿಯ ನಾಡುಮಾಸ್ಕೇರಿ ಇಲ್ಲಿ ಸಂಪರ್ಕಿಸಬಹುದು.

    ಅರ್ಜಿ ಸಲ್ಲಿಸುವ ವಿಧಾನದ ಕುರಿತು ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‍ಸೈಟ್ http://kreis.karnataka.gov.in ನಲ್ಲಿ ಪ್ರಚುರ ಪಡಿಸಲಾಗಿದೆ.

    300x250 AD

    ಆನ್‍ಲೈನ ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ಬೇಕಾಗಿರುವ ದಾಖಲೆಗಳು, ವಿದ್ಯಾರ್ಥಿಯ ಎಸ್.ಎ.ಟಿ.ಎಸ್ (SATS) ನಂ, ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ, ಮೀಸಲಾತಿ ಪ್ರಯೋಜನಗಳನ್ನು ಕೋರಿರುವ ಪಕ್ಷದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಸ್ಥಳೀಯ ಅಭ್ಯರ್ಥಿ ಎಂದು ರುಜುವಾತು ಪಡಿಸಲು ಅಗತ್ಯವಾದ ಆಧಾರ್ ಕಾರ್ಡ್/ ರೇಷನ್ ಕಾರ್ಡ್ /ಸ್ಥಳೀಯ ಪ್ರಮಾಣ ಪತ್ರ, ವಿಶೇಷ ವರ್ಗಗಳಿಗೆ ಸಂಬಂಧಿಸಿದ ಪ್ರಮಾಣ ಪತ್ರ ಆಗಿರುತ್ತವೆ.

    ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕುಮಟಾ ತಾಲೂಕಿನ ಗೋಕರ್ಣ ಹೋಬಳಿಯ ನಾಡುಮಾಸ್ಕೇರಿ ವಸತಿ ಶಾಲೆಯ ಮೊಬೈಲ್ ಸಂಖ್ಯೆ 9480143053/7795841975 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯು ತಿಳಿಸಿದೆ.

    Share This
    300x250 AD
    300x250 AD
    300x250 AD
    Back to top