ಶಿರಸಿ: ಕರ್ನಾಟಕ ರಾಜ್ಯವಿಜ್ಞಾನ ಪರಿಷತ್ತು, ಕರ್ನಾಟಕ ಸರ್ಕಾರದ ವಿಜ್ಷಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಫೆ.17 ರಂದು ಯಲ್ಲಾಪುರದ ಹೋಲಿ ರೋಜರಿ ಪ್ರೌಢ ಶಾಲೆಯಲ್ಲಿ ನಡೆಸಲಾದ ಜಿಲ್ಲಾಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಲಯನ್ಸ್ ಪ್ರೌಢಶಾಲೆಯ 9 ನೇ ತರಗತಿಯ ಸ್ತುತಿ ನಾಗೇಶ ತುಂಬಾಡಿ ಪ್ರಥಮ ಸ್ಥಾನ ಗಳಿಸಿ ರೂ. 5000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿರುವುದರೊಂದಿಗೆ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವಳು ತಯಾರಿಸಿದ ಗ್ಯಾಸ್ ಗೀಸರ್ ಅಳವಡಿಸಿರುವ ಸ್ನಾನದ ಮನೆಯಲ್ಲಿ ಕಾರ್ಬನ್ ಮೊನೋಕ್ಷೈಡ್ ಪ್ರಮಾಣ ಗುರುತಿಸಿ ಎಚ್ಚರಿಸುವ ಮಾದರಿ ಸಾರ್ವಜನಿಕ ಉಪಯೋಗಿಯಾಗಿದ್ದು, ನಿರ್ಣಾಯಕರ ಪ್ರಶಂಸೆಗೆ ಪಾತ್ರವಾಗಿದೆ.
9 ನೇ ತರಗತಿಯ ಕುಮಾರಿ ಕ್ಷೀತಿ ಕುಮಾರಸ್ವಾಮಿ ಹೆಗಡೆ ತೃತೀಯ ಸ್ಥಾನ ಪಡೆದು ಪ್ರಶಸ್ತಿ ಪತ್ರವನ್ನು ಪಡೆದಿರುತ್ತಾಳೆ. ಶಾಲೆಯ ವಿಜ್ಞಾನ ಶಿಕ್ಷಕಿಯರಾದ ಶೃತಿ ಪವಾರ ಹಾಗೂ ಕವಿತಾ ಭಟ್ ಇವರುಗಳು ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಪಕರು, ಶಿಕ್ಷಕ-ಶಿಕ್ಷಕೇತರ ಬಂಧುಗಳು, ಲಯನ್ಸ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿ, ರಾಜ್ಯ ಮಟ್ಟಕ್ಕೆ ಶುಭ ಹಾರೈಸಿದ್ದಾರೆ.