ಯಲ್ಲಾಪುರ: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಂದಾಯ ಇಲಾಖೆಯ ಕಾರ್ಯಕ್ರಮದ ಅನ್ವಯ ಉಮ್ಮಚಗಿಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಫೆ.19ರಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ತಾಲೂಕಿನ ಮಂಚಿಕೇರಿ ಹೋಬಳಿಯ ಉಮ್ಮಚಗಿ ಗ್ರಾಮದ ವಿದ್ಯಾ ಗಣಪತಿ ದೇವಸ್ಥಾನದ ಸಭಾಭವನದಲ್ಲಿ ಸಾರ್ವಜನಿಕ ಕುಂದುಕೊರತೆಗಳನ್ನು ಜಿಲ್ಲಾಧಿಕಾರಿಗಳು ಆಲಿಸಲಿದ್ದಾರೆ.
ಕಾರ್ಯಕ್ರಮದ ವಿವರ: ಬೆಳಿಗ್ಗೆ 10ರಿಂದ 10.30ರವರೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಅಂಗನವಾಡಿ ಶಾಲೆಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10.30ರಿಂದ 10.45ರವರೆಗೆ ಸಂಸ್ಕೃತ ಪಾಠ ಶಾಲೆಯಲ್ಲಿ ರಕ್ತದಾನ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ.
ಉಮ್ಮಚಗಿ ವಿದ್ಯಾ ಗಣಪತಿ ದೇವಸ್ಥಾನ ಸಭಾಭವನದಲ್ಲಿ10.45 ರಿಂದ ಮಧ್ಯಾಹ್ನ 11 ಗಂಟೆಯವರೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ಘಾಟನೆ, 11.15 ರಿಂದ 11.45ರವರೆಗೆ ಛತ್ರಪತಿ ಶಿವಾಜಿ ಜಯಂತಿ ಆಚರಣೆ, 11.45 ರಿಂದ 12.15ರವರೆಗೆ ವಿವಿಧ ಇಲಾಖೆಗಳ ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಇರುವ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಿದ್ದಾರೆ.
ಮಧ್ಯಾಹ್ನ 12.15 ರಿಂದ 12.45 ರವರೆಗೆ ಜನರಿಂದ ಅಹವಾಲು ಸ್ವೀಕಾರ, ಗ್ರಾಮ ವಾಸ್ತವ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮುಡಿಸುವುದು ಹಾಗೂ ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ತಿಳಿಸಲಾಗುವುದು. 12.45 ರಿಂದ 1.30ರವರೆಗೆ ಸಾರ್ವಜನಿಕರಿಗೆ ವಿವಿಧ ಪಿಂಚಣಿ ಯೋಜನೆಗಳ ಪ್ರಮಾಣಪತ್ರ ವಿತರಣೆ ಮಾಡಲಾಗುತ್ತದೆ. 2.30 ರಿಂದ 3.30ರವರೆಗೆ ಚುನಾವಣೆಗೆ ಸಂಬಂಧಿಸಿ ಫಾರಂ ನಂ.6 , 7, 8 ಹಾಗೂ 8ಎ ನೊಂದಣಿ ಮಾಡುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು. 3.30 ರಿಂದ 4 ರವರೆಗೆ ಜಿಲ್ಲಾಧಿಕಾರಿಗಳು ಚವತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4ರಿಂದ 5.30ರವರೆಗೆ ಕೋಟೆಮನೆ ಸಿದ್ದಿ ಕಾಲನಿಯಲ್ಲಿ ಪರಿಶಿಷ್ಟ ವರ್ಗ- ಪರಿಶಿಷ್ಟ ಪಂಗಡಗಳ ಕಾಲನಿಯ ಜನರ ಕುಂದು ಕೊರತೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.