ಹೊನ್ನಾವರ: ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡಿದ ಜನಪದ ತಜ್ಞ ಪ್ರಶಸ್ತಿಗೆ ಭಾಜನರಾದ ಹಿರಿಯ ಸಾಹಿತಿಗಳೂ, ಜಾನಪದ ತಜ್ಞರೂ ಆದ ಹೊನ್ನಾವರದ ಡಾ. ಶ್ರೀಪಾದ ಶೆಟ್ಟಿಯವರನ್ನು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅವರ ಮನೆಗೆ ಹೋಗಿ ಸನ್ಮಾನಿಸಿ ಗೌರವಿಸಿತು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ಎನ್. ವಾಸರೆ, ಗೌರವ ಕಾರ್ಯದರ್ಶಿ ಪಿ. ಆರ್. ನಾಯ್ಕ ‘ ಮಾಜಿ ಅಧ್ಯಕ್ಷ ರೋಹಿದಾಸ ನಾಯಕ್, ಹೊನ್ನಾವರ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಎಚ್. ಗೌಡ ಕುಮಟಾ ತಾಲ್ಲೂಕು ಘಟಕದ ಅಧ್ಯಕ್ಷ ಸುಬ್ಬಯ್ಯ ನಾಯ್ಕ್, ಕುಮಟಾ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎನ್. ಆರ್. ಗಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸುಧೀಶ ನಾಯ್ಕ್ ಹೊನ್ನಾವರ ತಾಲ್ಲೂಕು ಘಟಕದ ಅಧ್ಯಕ್ಷ ಎಂ. ಜಿ. ನಾಯ್ಕ, ಕಸಾಪ ಅಜೀವ ಸದಸ್ಯರಾದ ಸಾಧನಾ ಬರ್ಗಿ, ಸಂಧ್ಯಾ ಭಟ್. ಉದಯ ನಾಯ್ಕ, ಕರವೇ ಹೊನ್ನಾವರ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗೌಡ, ಮುಂತಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಾಹಿತಿ ಡಾ. ಶ್ರೀಪಾದ ಶೆಟ್ಟಿಯವರು ಕಸಾಪ ನೂತನ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಅವರನ್ನು ಸನ್ಮಾನಿಸಿ ಗೌರವಿಸಿದರು.