ಕಾರವಾರ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸ್ಟೋಟಕ ವಸ್ತುಗಳನ್ನು ಕಾರವಾರ ನಗರದ ಲಂಡನ್ ಬ್ರಿಡ್ಜ್ ಸಮೀಪ ಪೊಲೀಸರು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ.
84 ಜಿಲೆಟಿನ್ ಕಡ್ಡಿಗಳು, 4 ಇಲಕ್ಟ್ರಿಕ್ ಡಿಟೋನೆಟರ್ ವಶಕ್ಕೆ ಪಡೆಯಲಾಗಿದ್ದು, ಬಾಲ ಮುರುಗನ್, ಆನಂದ ನಾಯ್ಕ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ಅಂಕೋಲದಿಂದ ದಾಖಲೆ ಇಲ್ಲದೇ ಅವೈಜ್ಞಾನಿಕ ರೀತಿಯಲ್ಲಿ ಕಾರಿನಲ್ಲಿ ಕಾರವಾರಕ್ಕೆ ಸ್ಪೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಗಳ ಬಗ್ಗೆ ಮಾಹಿತಿ ಪಡೆದ ಕಾರವಾರ ನಗರ ಪೊಲೀಸರು ದಾಳಿ ನಡೆಸಿದ್ದಾರೆ.
ಈ ಘಟನೆ ಸಂಬಂಧ ಕಾರವಾರ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.