ಮುಂಡಗೋಡ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ವಡ್ಡರ ಓಣಿಯಲ್ಲಿ ಶ್ರೀ ದುರ್ಗಾದೇವಿ ದೇವಾಲಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.
ನಂತರ ಶ್ರೀ ದುರ್ಗಾದೇವಿ ದೇವಾಲಯ ಟ್ರಸ್ಟ್ ವತಿಯಿಂದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಉಮೇಶ್ ಬಿಜಾಪುರ, ಕೆ.ಸಿ.ಗಲಭಿ ಹಾಗೂ ಪಟ್ಟಣ ಪಂಚಾಯತ ಸದಸ್ಯರು, ಶ್ರೀ ದುರ್ಗಾದೇವಿ ದೇವಾಲಯ ಟ್ರಸ್ಟ್ ನ ಆಡಳಿ ಮಂಡಳಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.