ಕಾರವಾರ:ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಶನಿವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶಿವಾಜಿ ಮಹಾರಾಜ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿ ಆರ್ ವಿ ಕಟ್ಟಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್ ಜಿ ನಾಯ್ಕ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ರಾಜು ಪೂಜಾರಿ ಹಾಗೂ ಮರಾಠ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.