
ಬೆಂಗಳೂರು: ಕೊರೊನಾ ನಿರ್ವಹಣೆಯ ಕುರಿತಾಗಿ ಭಾನುವಾರ ಸಚಿವರು, ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಿದರು.
ರಾಜ್ಯಾದ್ಯಂತ ಅನ್ ಲಾಕ್4.0 ಜಾರಿಯ ಕುರಿತಾಗಿ ಕೈಗೊಂಡ ನಿರ್ಣಯದಂತೆ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಿದ್ದು 50% ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ.
ಹಾಗೂ ಜುಲೈ 26 ರಿಂದ ಪದವಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ.ಆದರೆ ಮೊದಲ ಡೋಸ್ ವ್ಯಾಕ್ಸಿನ್ ತೆಗೆದುಕೊಂಡವರಿಗೆ ಮಾತ್ರ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡಿದೆ.