ಹೊನ್ನಾವರ:ತಾಲೂಕಿನಲ್ಲಿ ಟಾಟಸುಮೊ ವಾಹನದಲ್ಲಿ 200 ಕೆ.ಜಿ ಗೊಮಾಂಸವನ್ನು ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದರು. ಈ ವೇಳೆ ತಾಲೂಕಿನ ಬೈಲಗದ್ದೆ ಸಮೀಪ ಅತಿವೇಗ ಅಜಾಗರೂಕತೆಯಿಂದ ದ್ವಿಚಕ್ರ ವಾಹನಕ್ಕೆ ಅಪಘಾತಪಡಿಸಿ, ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೇ ಚಲಾಯಿಸಿಕೊಂಡು ಬಂದ ಹಿನ್ನಲೆ ಪಟ್ಟಣದ ಗೇರುಸೊಪ್ಪಾ ವೃತ್ತದ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು.
ಇದನ್ನು ಗಮನಿಸಿದ ಟಾಟಾಸುಮೊದಲ್ಲಿರುವ ಆರೋಪಿಗಳು ವಾಹನವನ್ನು ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾರೆ. 200 ಕೆ.ಜಿ ಮೌಂಸದ ಮೌಲ್ಯ 35 ಸಾವಿರ ಎಂದು ಅಂದಾಜಿಸಲಾಗಿದೆ. ವಾಹನವನ್ನು ವಶಕ್ಕೆ ಪಡೆದಿರುವ ಹೊನ್ನಾವರ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.