ಶಿರಸಿ: ಅರಣ್ಯವಾಸಿಗಳಿಗೆ ಅರಣ್ಯ ಭೂಮಿಯ ಹಕ್ಕಿನ ಜಾಗೃತೆಯ ಕುರಿತು ಫೆ.27 ರಂದು ಕುಮಟದಲ್ಲಿ ಪ್ರಾರಂಭವಾಗಲಿರುವ ಅರಣ್ಯವಾಸಿಗಳನ್ನು ಉಳಿಸಿ-ಜಾಥ ಕಾರ್ಯಕ್ರಮದ ಪೂರ್ವಬಾವಿ ಸಭೆಯನ್ನು ಫೆ.25 ಮುಂಜಾನೆ 10:30 ಗಂಟೆಗೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ಕಾರ್ಯಾಲಯದಲ್ಲಿ ಕರೆಯಲಾಗಿದೆ ಎಂದು ಹೋರಾಟ ಸಮಿತಿಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯವಾಸಿಗಳ ಸಮಸ್ಯೆಗಳಿಗೆ ಸಂಘಟನಾತ್ಮಕ ಮತ್ತು ಕಾನೂನಾತ್ಮಕ ಹೋರಾಟ ಜರುಗಿಸುವ ಹೋರಾಟಗಾರರ ವೇದಿಕೆಯು ಅರಣ್ಯವಾಸಿಗಳ ಪರ ತೀವ್ರ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡ ಜಾಥದ ನೀಲಿ ನಕ್ಷೆ ಅಂತಿಮ ಗೊಳಿಸುವ ಉದ್ದೇಶದಿಂದ ಸಭೆ ಕರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.