
ಶಿರಸಿ: ಸರಕಾರದಿಂದ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೋಲೀಸರು 26ಟನ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಶಿರಸಿ ಗ್ರಾಮೀಣ ಪೋಲೀಸರು ಕೈಗೊಂಡ ಈ ಕಾರ್ಯಾಚರಣೆಯಲ್ಲಿ ಸಿಪಿಐ ರಾಮಚಂದ್ರ ನಾಯಕ ಹಾಗೂ ಗ್ರಾಮೀಣ ಠಾಣೆ ಪಿಎಸೈ ಈರಯ್ಯ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದಾರೆ. ಹಲವು ದಿನಗಳಿಂದ ಪಡಿತರ ಅಕ್ಕಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಮಾಹಿತಿ ಪೋಲೀಸರಿಗೆ ದೊರೆತಿದ್ದು ಹೆಚ್ಚಿನ ಮಾಹಿತಿಗಾಗಿ ಶೋಧಕಾರ್ಯ ಮುಂದುವರೆಸಲಾಗಿದೆ.