• Slide
    Slide
    Slide
    previous arrow
    next arrow
  • ಪಿ.ಎಚ್.ಡಿ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    300x250 AD

    ಕಾರವಾರ: 2021-22 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ -1 , 2ಎ, 3ಎ ಹಾಗೂ 3ಬಿ ಸೇರಿದ ವಿದ್ಯಾರ್ಥಿಗಳಿಗೆ ಮಾಸಿಕ ರೂ.10 ಸಾವಿರದಂತೆ ವ್ಯಾಸಂಗ ವೇತನ/ಫೆಲೋಶಿಪ್‍ಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.28 ರ ವರೆಗೆ ವಿಸ್ತರಿಸಲಾಗಿದೆ.

    ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://www.bcwd.karanataka.gov.in ಮೂಲಕ ಅರ್ಜಿ ಸಲ್ಲಿಸತಕ್ಕದ್ದು.

    300x250 AD

    ಹೆಚ್ಚಿನ ಮಾಹಿತಿಗಾಗಿ ಇಲಾಖಾ ದೂರವಾಣಿ ಸಂಖ್ಯೆ 8050770005/8050770004 ಅಥವಾ ಜಿಲ್ಲಾ ಕಚೇರಿ ದೂರವಾಣಿ 08382-226589 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿರೇಂದ್ರ ಬಾಡಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top