ಮುಂಡಗೋಡ: ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು, ಹಿಜಾಬ್ ಹಾಕಿಕೊಂಡೇ ಪಾಠ ಕೇಳಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಹಿಜಾಬ್ ಧರಿಸಿ ಪಾಠ ಕೇಳುವುದರಿಂದ, ಕಾಲೇಜಿವ ಯಾವೊಬ್ಬ ವಿದ್ಯಾರ್ಥಿಗೂ ಹಾಗೂ ಶಿಕ್ಷಕರರಿಗೂ ತೊಂದರೆ ಆಗುತ್ತಿಲ್ಲ. ಹೈಕೋರ್ಟ ಆದೇಶ ಪೂರ್ಣ ಪ್ರಮಾಣದಲ್ಲಿ ತೀರ್ಪು ಬರುವರೆಗೆ, ಮೊದಲಿನಂತೆ ಹಿಜಾಬ್ ಹಾಕಿಕೊಂಡು ಪಾಠ ಕೇಳಲು ಅವಕಾಶ ಮಾಡಿಕೊಡಬೇಕು. ತರಗತಿ ಒಳಗೆ ಹಿಜಾಬ್ ಹಾಕಿಕೊಂಡು ಹೋಗಲು ಶಿಕ್ಷಕರು ಅವಕಾಶ ನೀಡುತ್ತಿಲ್ಲ. ಇದರಿಂದ ತರಗತಿಗಳಿಗೆ ಗೈರಾಗುತ್ತಿದ್ದೇವೆ. ಮುಂದೆ ಪರೀಕ್ಷೆಯಲ್ಲಿ ಇದರಿಂದ ನಮಗೆ ಬಹಳ ಸಮಸ್ಯೆ ಆಗುತ್ತದೆ. ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಹೋಗಲು ಅವಕಾಶ ಮಾಡಿಕೊಡುವಂತೆ ವಿದ್ಯಾರ್ಥಿನಿಯರು ಒತ್ತಾಯಿಸಿದರು.
ತಹಶೀಲ್ದಾರ್ ಶ್ರೀಧರ ಮುಂದಲಮನಿ ಮಾತನಾಡಿ, ಹಿಜಾಬ್ ವಿಚಾರದಲ್ಲಿ ಹೈಕೋರ್ಟ ಆದೇಶವನ್ನು ಪಾಲಿಸಬೇಕಾಗಿದೆ. ತಿಳಿದುಕೊಳ್ಳುವ ಶಕ್ತಿ ಹೊಂದಿರುವ ವಿದ್ಯಾರ್ಥಿಳಿದ್ದೀರಿ. ಪೂರ್ತಿ ತೀರ್ಪ ಬರುವರೆಗೂ, ಸದ್ಯದ ಮಟ್ಟಿಗೆ ನ್ಯಾಯಾಲಯದ ಮಧ್ಯಂತರ ಆದೇಶಕ್ಕೆ ಎಲ್ಲರೂ ಗೌರವ ಕೊಡಲೇಬೇಕು. ನಿಮ್ಮ ಮನವಿಯನ್ನು ಜಿಲ್ಲಾಧಿಕಾರಿ ಅವರಿಗೆ ಕಳಿಸಿಕೊಡಲಾಗುವುದು ಎಂದು ತಹಶೀಲ್ದಾರ್ ಹೇಳಿದರು.