ಕಾರವಾರ: ಶಿವಮೊಗ್ಗದಲ್ಲಿ ಭಾನುವಾರ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಖಂಡನೀಯ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಲಿ. ಎಸ್.ನಾಯ್ಕ ತಿಳಿಸಿದ್ದಾರೆ.
ಇಂತಹ ಬರ್ಬರ ಕೃತ್ಯವನ್ನು ನಾಗರಿಕ ಸಮಾಜ ಸಹಿಸುವ ಪ್ರಶ್ನೆಯೇ ಇಲ್ಲ. ಹರ್ಷ ಅವರನ್ನು ಹತ್ಯೆ ಮಾಡಿದ ಕೆಲವು ಆರೋಪಿಗಳನ್ನು ಈಗಾಗಲೆ ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನೂ ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ. ಹಂತಕರಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಇನ್ನು ಮುಂದೆ ಇಂತಹ ಘಟನೆ ಆಗದಂತೆ ಸಂದೇಶ ರವಾನಿಸಬೇಕಾಗಿದೆ ಎಂದು ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.