
ಯಲ್ಲಾಪುರ: ರಾಜ್ಯದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಂದಿನಿಂದ ಪ್ರಾರಂಭವಾಗಿದ್ದು, ಕಾರ್ಮಿಕ ಖಾತೆ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶಿವರಾಮ ಹೆಬ್ಬಾರ್ ಸೋಮವಾರ ಪಟ್ಟಣದ ವೈ.ಟಿ.ಎಸ್.ಎಸ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ವಿಜಯ ಮಿರಾಶಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು