
ಶಿರಸಿ: ತಾಲೂಕಿನ ಬೀಳೂರಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಮಾಜಿ ಸಚಿವ, ಶಾಸಕ ಆರ್.ವಿ. ದೇಶಪಾಂಡೆ ಹಾಗೂ ಪ್ರಶಾಂತ್ ದೇಶಪಾಂಡೆ ವಿಆರ್‌ಡಿಮ್ ಟ್ರಸ್ಟ್ ನ ಮೂಲಕ ನೀಡಿದ ಬಿಸ್ಕೇಟ್ ಪ್ಯಾಕ್ ಗಳನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಕಾರ್ಯಕರ್ತರು ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಸಿ.ಎಫ್. ನಾಯ್ಕ್ ಮುಖಂಡರುಗಳಾದ ಬಸವರಾಜ್ ದೊಡ್ಮನಿ, ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಅನೇಕ ಕಾರ್ಯಕರ್ತರು ಹಾಜರಿದ್ದರು.