
ಯಲ್ಲಾಪುರ: ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಹೊಣೆಗಾರಿಕೆ ಪತ್ರಕರ್ತರ ಮೇಲಿದ್ದು ಪತ್ರಕರ್ತರು ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.
ರವಿವಾರ ಅಡಿಕೆಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಬಾಕಿ ಇವೆ. ಬಯಲುಸೀಮೆ ಮಲೆನಾಡು ಹಾಗು ಕರಾವಳಿಯನ್ನು ಸಂಪರ್ಕಿಸುವ ಅಂಕೋಲಾ ಹುಬ್ಬಳ್ಳಿ ರೈಲು ಮಾರ್ಗ ಕೆಲ ಪರಿಸರ ವಾದಿಗಳಿಂದ ಇನ್ನೂ ಜಾರಿಗೆ ಬಂದಿಲ್ಲ. ನಕಲಿ ಪರಿಸರವಾದಿಗಳ ಮುಖವಾಡ ತೊಟ್ಟು ಅವರು ಅಭಿವೃದ್ಧಿಗೆ ಕೆಲಸಗಳಿಗೆ ತೊಂದರೆ ಮಾಡುತ್ತಿದ್ದಾರೆ. ಇದರಿಂದ ಸರ್ಕಾರಕ್ಕೂ ನೂರಾರು ಕೋಟಿ ರೂಪಾಯಿಗಳ ನಷ್ಟವಾಗಿದೆ. ಪತ್ರಕರ್ತರು ಈ ಕುರಿತು ಸಮಾಜದಲ್ಲೊ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಪತ್ರಕರ್ತರು ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಅಭಿಪ್ರಾಯ ಪಟ್ಟರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಕಾರ್ಯನಿರತ ಪತ್ರಿಕಾ ವರದಿಗಾರರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ಸ್ವಾತಂತ್ರ್ಯಾಪೂರ್ವದಿಂದಲೂ ಪತ್ರಿಕೆಗಳು ತಮ್ಮ ಘನತೆ ಹಾಗೂ ಬದ್ಧತೆಯನ್ನು ಕಾಯ್ದುಕೊಂಡು ಬಂದಿವೆ . ಪ್ರಸ್ತುತ ಸಾಮಾಜಿಕ ಜಾಲತಾಣಗಳ ಅಬ್ಬರದಲ್ಲಿ ಸರಿ-ತಪ್ಪುಗಳ ಕುರಿತಾಗಿ ವಿವೇಚನೆ ಹಾಗೂ ಪ್ರಜ್ಞಾವಂತಿಕೆಗಳಿಂದ ಪತ್ರಕರ್ತರು ಕಾರ್ಯನಿರ್ವಹಿಸಬೇಕಿದೆ. ನಕಲಿ ಪತ್ರಕರ್ತರ ಹಾವಳಿಯೂ ಹೆಚ್ಚಾಗಿದ್ದು ಇದರಿಂದ ಉತ್ತಮ ಪತ್ರಕರ್ತರು ಕಳೆದುಹೋಗುವ ಅಪಾಯವಿದೆ.
ಪತ್ರಕರ್ತರನ್ನೂ ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ತಂದು ಪತ್ರಕರ್ತರಿಗೂ ನೆರವು ನೀಡುವತ್ತ ಸರ್ಕಾರ ಮುಂದಾಗಬೇಕಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ಈ ಸಂದರ್ಭದಲ್ಲಿ ಕೆ.ಶ್ಯಾಮರಾವ್ ದತ್ತಿನಿಧಿ ಪ್ರಶಸ್ತಿಯನ್ನು ಪತ್ರಕರ್ತರಾದ ಜಯರಾಮ ಹೆಗಡೆ ಶಿರಸಿ,ಹಾಗೂ ವಿಠ್ಠಲ್ ದಾಸ ಕಾಮತ್ ಅಂಕೋಲಾ ಅವರಿಗೆ ನೀಡಿ ಗೌರವಿಸಲಾಯಿತು.ತಾಲೂಕಾ ಸಂಘದ ವತಿಯಿಂದ ಸಾಹಿತಿ ಗಣಪತಿ ಬಾಳೆಗದ್ದೆ,ಪತ್ರಿಕಾ ಸಾಗಾಟಗಾರ ಪ್ರಶಾಂತ ಗೋಖಲೆ ಕೊಡಿಗದ್ದೆ ಅವರನ್ನು ಸನ್ಮಾನಿಸಲಾಯಿತು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಯೋಜನೆ ಮತ್ತು ಅಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ,ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ್,ಪ.ಪಂ ಅಧ್ಯಕ್ಷೆ ಸುನಂದಾದಾಸ್,ಪತ್ರಿಕಾ ಸಂಘದ ರಾಜ್ಯ ಸಮಿತಿ ಸದಸ್ಯ ಜಿ.ಸುಬ್ರಾಯ ಭಟ್ ಬಕ್ಕಳ, ಪತ್ರಕರ್ತೆ ಶೈಲಜಾ ಗೋರ್ನಮನೆ, ಅಡಿಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ , ಸಿಪಿಐ ಸುರೇಶ ಯಳ್ಳುರ್ ಉಪಸ್ಥಿತರಿದ್ದರು.
ತಾಲೂಕಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಭಟ್ಡ ಆನಗೋಡ ಸ್ವಾಗತಿಸಿದರು.ಉಪಾಧ್ಯಕ್ಷ ಜಿ.ಎನ್.ಭಟ್ಟ ತಟ್ಟಿಗದ್ದೆ ಪ್ರಸ್ತಾಪಿಸಿದರು.ಜಿಲ್ಲಾ ಪ್ರಧಾನಕಾರ್ಯದರ್ಶಿ ನರಸಿಂಹ ಅಡಿ ಪರಿಚಯಿಸಿದರು. ಪತ್ರಕರ್ತ ಸಂಘದ ಕಾರ್ಯದರ್ಶಿ ಶ್ರೀಧರ ಅಣಲಗಾರ ಖಜಾಂಚಿ ಪ್ರಭಾವತಿ ಗೋವಿ ಸನ್ಮಾನಪತ್ರ ವಾಚಿಸಿದರು. ಪತ್ರಕರ್ತರಾದ ಸುಬ್ರಾಯ ಬಿದ್ರೆಮನೆ,ಕೆಬಲ್ ನಾಗೇಶ ನಿರೂಪಿಸಿದರು.